Published
8 months agoon
By
Akkare Newsಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಎ.21ರಂದು ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ನಡೆದಿದೆ. ಸೊರಕೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಕಟ್ಟತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಸೈಡ್ ಕೊಡುವ ವೇಳೆ ನಿಯಂತ್ರಣ ತಪ್ಪಿ ಅಲ್ಲೇ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಿಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬ ರಸ್ತೆಗೆ ವಾಲಿಕೊಂಡು ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸವಣೂರು ವಿಭಾಗದವರು ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ. ಘಟನೆಯಿಂದ ಸ್ಥಳೀಯವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.