ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಪ್ರಜ್ವಲ್ ರೇವಣ್ಣ ಒಬ್ಬ ಅತ್ಯಾಚಾರಿ ಕೊನೆಗೂ ಮೌನ ಮುರಿದ ಪ್ರಧಾನಿ ಮೋದಿ

Published

on

ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ ಎಂದು ಸೋಮವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.







ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್‌ ಪಕ್ಷ, ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement