ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.
ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.
ಪೊಲೀಸರು ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರಕಿರಲಿಲ್ಲ. ಮೇ 9ರಂದು ಪಾಂಡೇಶ್ವರ ಠಾಣೆಗೆ ವಿದ್ಯಾರ್ಥಿನಿ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಇದ್ದಾಳೆ ಎಂಬ ಮಾಹಿತಿ ದೊರಕಿತ್ತು. ಅಲ್ಲಿ ತೆರಳಿದ ಪೊಲೀಸರು ಆಕೆಯನ್ನು ಮಂಗಳೂರಿಗೆ ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಎಂಎಸ್ಸಿ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗಿತ್ತು.
ತೀವ್ರ ಒತ್ತಡದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿ ತೆರಳಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ತೆರಳುವ ಬಸ್ಸನ್ನು ಹತ್ತಿದ್ದಳು. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಫ್ರೀ ಇರುವುದರಿಂದ ನೇರವಾಗಿ ಚಿಕ್ಕಮಗಳೂರು ತೆರಳಿದ್ದು, ಅಲ್ಲಿಂದ ಮೈಸೂರಿಗೆ ಹೋಗುವ ಬಸ್ ಹತ್ತಿದ್ದಾಳೆ. ಅಲ್ಲಿಂದ ಮತ್ತೆ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್ ನಿಲ್ದಾಣದಲ್ಲಿ ನಿಂತುಕೊಂಡಿದ್ದಳು.
ಅಲ್ಲಿದ್ದಾಗಲೇ ತಮಿಳು ಮಾತನಾಡುವ ಹುಡುಗಿಯೊಬ್ಬಳು ಪರಿಚಯ ಆಗಿದ್ದು, ಆಕೆಯ ಜೊತೆಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ. ಸುಳ್ಯದ ಅರಂತೋಡಿನಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದಳು. ದೀಪಿಕಾಗೆ ತಮಿಳು ಬಿಟ್ಟರೆ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ. ಮೂಲತಃ ತಮಿಳುನಾಡಿನವರಾಗಿದ್ದು, ತಂದೆ, ತಾಯಿ ಮಂಗಳೂರಿನಲ್ಲಿ ನೆಲೆಸಿದ್ದರಿಂದ ಇಲ್ಲಿಯೇ ಓದು ಪೂರೈಸಿದ್ದಳು. ಸುಳ್ಯದಲ್ಲಿ ಹುಡುಗಿ ಇರುವ ಬಗ್ಗೆ ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸ್ ಸಿಬಂದಿ ಒಬ್ಬರಿಗೆ ತಿಳಿಸಿದ್ದರು. ಅದರಂತೆ, ಪಾಂಡೇಶ್ವರ ಠಾಣೆ ಪೊಲೀಸರು ತೆರಳಿ ಆಕೆಯನ್ನು ಮಂಗಳೂರಿಗೆ ಕರೆತಂದಿದ್ದಾರೆ.