Published
7 months agoon
By
Akkare Newsಉಪ್ಪಿನಂಗಡಿ: ಅಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ
ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಭಾನುವಾರ ರಾತ್ರಿ
ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ.
ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತ ಅಟೋ ಚಾಲಕ. ಪದ್ಮುಂಜಕ್ಕೆ ಬಾಡಿಗೆಗೆಂದು ತೆರಳಿದ ಇವರ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಇವರ ತಲೆಗೆ ಗಂಭೀರ ಗಾಯವಾಗಿತ್ತು.
ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸುವಷ್ಟರಲ್ಲಿ ಇವರು ಮೃತಪಟ್ಟಿದ್ದಾರೆ. ಸೌಮ್ಯ ಸ್ವಭಾದವರಾಗಿದ್ದ ಇವರು ಅಟೋ ರಿಕ್ಷಾ ಚಾಲನೆಯೊಂದಿಗೆ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕೊಂದರಲ್ಲಿ ಫಿಗ್ರಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಾ ಎಲ್ಲರಿಗೂ ಚಿರಪರಿಚಿತರಾಗಿದ್ದರು. ರಿಕ್ಷಾದಲ್ಲಿ ಎರಡು ಮಕ್ಕಳು ಹಾಗೂ ಅವರ ತಂದೆ ಪ್ರಯಾಣಿಕರಾಗಿದ್ದು, ಅವರು ಅಲ್ಪಸ್ವಲ್ಪ ತರಚಿದ ಗಾಯದಿಂದ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅವಿವಾಹಿತರಾಗಿರುವ ಮೃತ ದಿನೇಶ್ ಅವರು ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.