Published
7 months agoon
By
Akkare Newsಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ (Supplement) ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಏಪ್ರಿಲ್ 29 ರಿಂದ ಮೇ 16 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಇದೀಗ ಅದರ ಫಲಿತಾಂಶ ಇಂದು (ಮೇ 21)ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರ ಬೀಳಲಿದೆ. 2024ರ ಏಪ್ರಿಲ್ 19ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ 2 ಅನ್ನು ನಡೆಸಲಾಗಿತ್ತು. ವಿಶೇಷ ಎಂದರೆ ಈ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.
ಇನ್ನು, ದ್ವಿತೀಯ ಪಿಯುಸಿ 2ರ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದೆ. ದ್ವಿತೀಯ ಪಿಯುಸಿ 2ರ ಫಲಿತಾಂಶವನ್ನು ಇಂದು ಮಧ್ಯಾಹ್ನ 03 ಗಂಟೆಗೆ https://karresults.nic.in ವೆಬ್ಸೈಟ್ನಲ್ಲಿ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
ಫಲಿತಾಂಶ ನೋಡುವುದು ಹೇಗೆ?
http://karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್ಗೆ ಭೇಟಿ ನೀಡಿ.
ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಬಳಿಕ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಿ.