Published
2 years agoon
By
Akkare News
ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಎಂಬುವವರು ಮೇ.6 ರಂದು ಮೃತ ಹೊಂದಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ಕೂಡಾ ಮಾಡಲಾಗಿತ್ತು. ಆದರೆ ಈ ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿದ ಮೃತರ ಸಹೋದರ ಇಬ್ರಾಹಿಂ ಅವರು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು.





ಇದೀಗ ಪ್ರಕರಣ ದಾಖಲಿಸಿದ ಮಂಜೇಶ್ವರ ಪೊಲೀಸರು, ದಫನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದು, ಈ ಕಾರಣದಿಂದ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಗ್ಗೆ ಆಗಮಿಸಿದ್ದು, ಜೊತೆಗೆ ಮಂಗಳೂರಿನ ಯೆನೋಪಯ ಆಸ್ಪತ್ರೆಯ ಫಾರೆನ್ಸಿಕ್ ವಿಭಾಗದ ಸಿಬ್ಬಂದಿಗಳು, ಕಾಸರಗೋಡು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತನಿಖೆಗೆ ನೆರವು ನೀಡಿದ್ದಾರೆ.