Published
7 months agoon
By
Akkare Newsವಿಟ್ಲ :ಮೇ 28,ನೈಋತ್ಯ ಪದವೀಧರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಹಾಗೂ ಪದವೀಧರ ಮತ್ತು ಶಿಕ್ಷಕರ ಮತದಾರ ಪಟ್ಟಿ ಹಾಗೂ ಮಾಹಿತಿ ಕಾರ್ಯಾಗಾರವೂ ಇಂದು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್ ,ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಉಸ್ತುವಾರಿ ವಿಜಯಕುಮಾರ್ ಸೊರಕೆ,ಭೂ ನ್ಯಾಯ ಮಂಡಳಿ ಸದಸ್ಯ ಯುನಿಕ್ ಅಬ್ದುಲ್ ರಹ್ಮಾನ್,ಜಿಲ್ಲಾ ಕಾಂಗ್ರೆಸ್ ಸದಸ್ಯ ರಮಾನಾಥ್ ವಿಟ್ಲ,ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ,ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿ ಎ ರಶೀದ್, ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ವಿಕೆಎಂ ಅಶ್ರಫ್, ಪದ್ಮಿನಿ, ಸುನೀತಾ ಕೋಟ್ಯಾನ್, ಕೇಪು ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಇಡ್ಕಿದು ವಲಯ ಕಾಂಗ್ರೆಸ್ ಅಧ್ಯಕ್ಷ ನಾಸಿರ್ ಕೋಲ್ಪೆ, ಮಾಣಿಲ ಗ್ರಾ.ಪಂ ಅಧ್ಯಕ್ಷ ಶ್ರೀಧರ್ ಶೆಟ್ಟಿ ಬಾಳೆಕಲ್ಲು,ಪೆರುವಾಯಿ ವಲಯ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರನಾಥ್ ರೈ,ಬ್ಲಾಕ್ ಸಾಮಾಜಿಕ ಜಾಲತಾಣ ಸಮಿತಿ ಅಧ್ಯಕ್ಷ ಅಬ್ಬು ನವಗ್ರಾಮ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.