ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬಿಜೆಪಿ ಪಕ್ಷದ ಆದೇಶ ಉಲ್ಲಂಘನೆ ಹಿನ್ನಲೆ ಮೂವರನ್ನು ಜವಾಬ್ದಾರಿಯಿಂದ ವಜಾಗೊಳಿಸಿದ ಬಿಜೆಪಿ

Published

on

 

ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಮೂವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿದೆ.

 

ನೆರಿಯ ಗ್ರಾಮ ಪಂಚಾಯತ್ ಸದಸ್ಯರುಗಳಾಗಿದ್ದು, ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು ಮನೆ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ) , ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ) ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement