Published
7 months agoon
By
Akkare Newsಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ಬೆಂಗಳೂರಿಗೆ ಬಂದ್ರೆ ಏರ್ ಪೋರ್ಟ್ ನಲ್ಲೇ ಬಂಧಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಈಗಾಗಲೇ ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.
ಆದ್ದರಿಂದ ಅವರು ಭಾರತಕ್ಕೆ ಬರುತ್ತಿದ್ದಂತೆ ಏರ್ ಪೋರ್ಟ್ ನಲ್ಲೇ ಎಸ್ ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಜರ್ಮನಿಂದ ಬೆಂಗಳೂರಿಗೆ ವಾಪಸ್ ಆಗಲು ನಾಳೆಯೇ ಟಿಕೆಟ್ ಬುಕ್ ಆಗಿದೆ ಎಂದು ವರದಿಯಾಗಿದೆ.
ಜರ್ಮನಿಗೆ ತೆರಳಲು ಲುಪ್ತಾನ್ಸಾ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ.