ಮಂಗಳೂರು: ಗಾಯಕ ರಾಜೇಶ್ ಗೆ ವಂಚನೆ ಮಾಡಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ. ವೃತ್ತಿಯಲ್ಲಿ ಗಾಯಕರಾಗಿದ್ದಾರೆ. ಇವರು Arvind vivek ಎಂಬ ಹೆಸರಿನಲ್ಲಿ ಫೇಸ್ಬುಕ್ ಪೇಜ್ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. 2024 ರಲ್ಲಿ ಫೇಸ್ಬುಕ್ ಮೂಲಕ ಸಂಧ್ಯಾ ಪವಿತ್ರ ನಾಗರಾಜ್ ಪರಿಚಯವಾಗಿದೆ. ಈ ವೇಳೆ ಹೋರಾಟಗಾರ್ತಿ ಎಂದು ನಂಬಿಸಿದ್ದ ಸಂಧ್ಯಾ, ನೊಂದವರಿಗೆ, ವಂಚನೆಗೊಳಪಟ್ಟವರಿಗೆ ಸಹಾಯ ಮಾಡುತ್ತಿರುವುದಾಗಿ ತಿಳಿಸಿದ್ದರು. ರಾಜ್ಯದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಅನೇಕ ಪ್ರಕರಣ ಬಗೆಹರಿಸಿಕೊಟ್ಟಿರುವುದಾಗಿ ಸಂಧ್ಯಾ ಹೇಳಿಕೊಂಡಿದ್ದರು. ಈ ವೇಳೆ ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ರಾಜೇಶ್ ತಿಳಿಸಿದ್ದರು. ಈ ಪ್ರಕರಣವನ್ನು ಹೈಕೋರ್ಟ್ನಲ್ಲಿ ಬಗೆಹರಿಸುವುದಾಗಿ ಆಕೆ ನಂಬಿಸಿದ್ದರು. ಈ ಬಗ್ಗೆ ದಾಖಲಾತಿ ಪಡೆಯಲು 2025ರ ಜನವರಿಯಲ್ಲಿ ಬೆಂಗಳೂರಿನ ಜೆ.ಪಿನಗರದ ಮನೆಗೆ ಸಂಧ್ಯಾ ಕರೆಸಿದ್ದರು. ಬಳಿಕ ಪ್ರಕರಣ ಬಗೆಹರಿಸಲು ಸ್ವಲ್ಪ ಖರ್ಚು ಇದೆ ಎಂದಿದ್ದರು. ದೂರುದಾರ ರಾಜೇಶ್ರಿಂದ ಹಂತ ಹಂತವಾಗಿ 3.20 ಲಕ್ಷ ರೂ. ಹಣವನ್ನು ಪಡೆದಿದ್ದರು. ಬಳಿಕವೂ ಸಮಸ್ಯೆ ಬಗೆಹರಿಯದ ಕಾರಣ ಈ ಬಗ್ಗೆ ರಾಜೇಶ್ ಪ್ರಶ್ನಿಸಿದ್ದರು. ಆಗ ಸಂಧ್ಯಾ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಸಂಶಯಗೊಂಡು ವಿಚಾರಿಸಿದಾಗ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ರಾಜೇಶ್ ತಿಳಿಸಿದ್ದಾರೆ. ದೂರಿನ ಹಿನ್ನೆಲೆ BNS ಕಾಯ್ದೆಯಡಿ 318(4), 351(2) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲ್ಲೂಕಿನ ಅರಿಯಡ್ಕ ಮತ್ತು ಕೆದಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂಡಸಾಗು ಜನತಾ ಕಾಲೊನಿ, ಮಜ್ಜಾರಡ್ಕ, ಗೋಳ್ತಿಲ ವ್ಯಾಪ್ತಿಯಲ್ಲಿ ನೊಣಗಳ ಕಾಟ ಅತಿಯಾಗಿದೆ. ಆಹಾರ ತಯಾರಿಸಲು, ಸೇವಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ...
ಬೆಂಗಳೂರು, – ಲೈಸೆನ್ಸ್ ನವೀಕರಣ ಹಾಗೂ ಹೊಸ ಪರವಾನಗಿ ಶುಲ್ಕ ಕಡಿಮೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮದ್ಯ ಮಾರಾಟಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಶುಲ್ಕ ಹೆಚ್ಚಳದಿಂದ ಮದ್ಯ ಮಾರಾಟಕ್ಕೆ ತೀವ್ರ ತೊಂದರೆಯಾಗಿದೆ. ಹೀಗಾಗಿ...
ಪುತ್ತೂರು: ” ಸದಾ ಕಾಲ ತನ್ನನ್ನು ತಾನು ಸೇವೆಗೆ ಮುಡಿಪಾಗಿಟ್ಟು ಇಲಾಖಾ ಕೆಲಸಗಳಲ್ಲಿಯೂ ತೊಡಗಿಸಿಕೊಂಡು ಕ್ರೀಯಶೀಲರಾಗಿದ್ದ ಶಿಕ್ಷಕಿಯಾಗಿದ್ದ ಗಂಗಾವತಿಯವರು ತನ್ನ ಸೇವೆಯನ್ನು ಕರ್ತವ್ಯವೆಂದು ಭಾವಿಸಿದವರು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ” ಎಂದು ಸಮನ್ವಯಾಧಿಕಾರಿಗಳಾದ ನವೀನ್ ವೇಗಸ್...
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಚುನಾವಣೆಯಲ್ಲಿ ಶಾಲಾ ನಾಯಕನಾಗಿ 10 ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಪಿ ಎಸ್ ,ಉಪನಾಯಕನಾಗಿ 9ನೇ ತರಗತಿ ವಿದ್ಯಾರ್ಥಿಯಾದ...
ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಾಕುಕ್ಕು – ಕಂಜೂರು ದೈವಸ್ಥಾನದ ರಸ್ತೆಯು 20 ವರ್ಷಗಳಿಂದ ತೀರಾ ಅದೆಗೆಟ್ಟಿದ್ದು ವಾಹನಗಳ ಸಂಚಾರಕ್ಕೆ, ನಡೆದು ಕೊಂಡು ಹೋಗಲು ತೊಂದರೆಯಾಗುತ್ತಿದೆ, ಆದದ್ದರಿಂದ ಶಾಸಕರು ಕೂಡಲೇ ಈ ರಸ್ತೆಗೆ ಅನುದಾನವನ್ನು...
ಮಹಿಳೆಯೊಬ್ಬರನ್ನು ಮಠದಲ್ಲಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಮೂಡಲಗಿಯ ಶಿವಾಪುರ ಗ್ರಾಮದ ಅಡವಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿ ಅವರನ್ನು ಗ್ರಾಮದ ಹಿರಿಯರು ಮಠದಿಂದ ಹೊರಹಾಕಿದ್ದಾರೆ. ವಿಷಯ ತಿಳಿದು ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸ್ಐ ರಾಜು ಪೂಜೇರಿ...
ಪುತ್ತೂರು: ಪುತ್ತೂರು ಕೋ ಓಪರೇಟಿವ ಟೌನ್ ಬ್ಯಾಂಕ್ನ ಹಿರಿಯ ಅಧಿಕಾರಿಯಾಗಿ ಜ್ಯೋತಿ ಎನ್.ಎಸ್ ಅವರು ವಿಟ್ಲ ಶಾಖೆಯ ನೂತನ ಶಾಖಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ನಲ್ಲಿ ಕಳೆದ ಹಲವು ವರ್ಷಗಳಿಂದ ಹಿರಿಯ ಅಧಿಕಾರಿಯಾಗಿ...
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ...
ಸರ್ವೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸರ್ವೆ ರಾಘವೇಂದ್ರ ಮಠ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಸರ್ವೆ ವಲಯ ಉಸ್ತುವಾರಿ ರವೀಂದ್ರ ನೆಕ್ಕಿಲು, ಸರ್ವೆ...